ಅಭಿಪ್ರಾಯ / ಸಲಹೆಗಳು

ನಮ್ಮ ಬಗ್ಗೆ

 

ಕೃಷಿ ಸಚಿವಾಲಯ

 

ಅಂದಿನ ಮೈಸೂರು ರಾಜ್ಯದಲ್ಲಿ 18ನೇ ಶತಮಾನದಲ್ಲಿಯೇ ಮಾರಿಶಿಯಸ್ ದ್ವೀಪದಿಂದ ಕಬ್ಬಿನ ತಳಿಗಳನ್ನು ತರಿಸಿ, ಅಭಿವೃದ್ಧಿ ಪಡಿಸಿರುವ ಬಗ್ಗೆ ದಾಖಲೆಗಳಿದ್ದು, ಕೃಷಿ ಅಭಿವೃದ್ಧಿ ನಾಂದಿ, 18ನೇ ಶತಮಾನದಿಂದಲೇ ಪ್ರಾರಂಭವಾಯಿತೆನ್ನಬಹುದು. 19ನೇ ಶತಮಾನದಿಂದಲೇ ಅಂದಿನ ಮೈಸೂರು ರಾಜ್ಯದಲ್ಲಿ ವೈಜ್ಞಾನಿಕ ಕೃಷಿ, ಪಶುಸಂಗೋಪನೆ ಮತ್ತು ತೋಟಗಾರಿಕೆ ಅಭಿವೃದ್ಧಿಗೆ ಮೈಸೂರಿನ ಒಡೆಯರ್ ರವರು ಚಾಲನೆ ನೀಡಿದರು. 20ನೇ ಶತಮಾನದ ಪೂರ್ವಾರ್ಧದಲ್ಲಿ ಅಂದರೆ, 1913ರ ಜುಲೈ 5 ರಂದು ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಕೃಷಿ ಇಲಾಖೆಯನ್ನು ಸ್ಥಾಪಿಸಲಾಯಿತು. ಮೊದಲನೆ ಕೃಷಿ ನಿರ್ದೇಶಕರಾಗಿ  ಡಾ|| ಸಿ. ಕೋಲ್ಮನ್ ರವರು ಕಾರ್ಯಭಾರ ವಹಿಸಿಕೊಂಡರು. ಅಂದು ಪ್ರಾರಂಭವಾದ ಕೃಷಿ ಇಲಾಖೆ ರೈತರ ಏಳಿಗೆಗಾಗಿ, ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, 2013ನೇ ಸಾಲಿಗೆ ಒಂದು ಶತಮಾನದ ಸಂಪೂರ್ಣ ಸೇವೆಯನ್ನು ಪೂರೈಸಿದ್ದು, ಸೇವೆಯನ್ನು ಈಗಲೂ ಕೂಡ ಮುಂದುವರೆಸಿದೆ.

 

        ಕೃಷಿ ಇಲಾಖೆಯು ರಾಜ್ಯದ ಪ್ರಮುಖ ಅಭಿವೃದ್ಧಿ ಇಲಾಖೆಗಳಲ್ಲಿ ಒಂದಾಗಿದ್ದು, ರೈತರ ಸೇವೆಯಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಕಾಲ ಕಾಲಕ್ಕೆ ವಿವಿಧ ಮೂಲಗಳಿಂದ ಹೊರಹೊಮ್ಮುವ ಸಂಶೋಧನಾ ಫಲಿತಾಂಶಗಳನ್ನು ಆಧುನಿಕ ತಂತ್ರಜ್ಞಾನವನ್ನು ಮಳೆ ಹಾಗೂ ನೀರಾವರಿ ಆಶ್ರಯದ ಸುಮಾರು ಒಟ್ಟು 121.61 ಲಕ್ಷ ಹೆಕ್ಟೇರುಗಳಲ್ಲಿ ಸಾಗುವಳಿ ಮಾಡುತ್ತಿರುವ 78.32 ಲಕ್ಷ ರೈತ ಕುಟುಂಬಗಳಿಗೆ ಪರಿಣಾಮಕಾರಿಯಾಗಿ ವರ್ಗಾಯಿಸುವ ಮೂಲಕ ಅವರುಗಳು ತಮ್ಮ ಹಿಡುವಳಿಗಳಲ್ಲಿ ಆಧುನಿಕ ತಂತ್ರಜ್ಞಾನ ಬಳಸಿ ಹೆಚ್ಚು ಇಳುವರಿ ಪಡೆಯಲು ನೆರವು ನೀಡುತ್ತಿದೆ. 2018-19ರಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ (ಮುಂಗಾರಿನಲ್ಲಿ 24 ಜಿಲ್ಲೆಗಳು, 100 ತಾಲ್ಲೂಕುಗಳಲ್ಲಿ, ಹಿಂಗಾರಿನಲ್ಲಿ-30 ಜಿಲ್ಲೆಗಳು, 156 ತಾಲ್ಲೂಕುಗಳಲ್ಲಿ) ಬರಗಾಲ ಪರಿಸ್ಥಿತಿಯಿಂದಾಗಿ 135 ಲಕ್ಷಟನ್ ಆಹಾರ ಧಾನ್ಯ ಉತ್ಪಾದನೆ ಗುರಿಗೆ ಎದುರಾಗಿ  110.29 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆ ಸಾಧಿಸಲಾಗಿದೆ.

 

 

 

ಇತ್ತೀಚಿನ ನವೀಕರಣ​ : 07-08-2019 05:11 PM ಅನುಮೋದಕರು: Admin


ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಕೃಷಿ ಸಚಿವಾಲಯ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080